ಇಂದು 'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ'ದ ಪ್ರಧಾನ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ. ಹರೀಶ್ ರವರು ಧ್ವಜಾರೋಹಣ ಮಾಡಿದರು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ'ದ ಪ್ರಧಾನ ಕಚೇರಿಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ರವರು ಬ್ಯಾಂಕ್ ನ “ಪ್ರಗತಿ ಪರಿಶೀಲನಾ ಸಭೆ” ನಡೆಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ರವರು, ಉಪಾಧ್ಯಕ್ಷರಾದ ಶ್ರೀ ಬಿ. ಸದಾನಂದ [...]
ಚಾಮರಾಜನಗರ ಜಿಲ್ಲೆಯ ಕೆಂಪನಪುರ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ "ಕೆಂಪನಪುರ ಚಾಮರಾಜನಗರ ತಾಲೂಕು ಮತ್ತು ಜಿಲ್ಲಾ ಸಂಘ"ದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ನಡೆಯಿತು.ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಜಿ. ಡಿ. ಹರೀಶ್ ರವರು, ಎಂಸಿಡಿಸಿಸಿ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಬಿ. ಎನ್. ಸದಾನಂದ ರವರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಶ್ರೀ ಜಿ. [...]
ಇಂದು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಮಟ್ಟದ ತಾಂತ್ರಿಕ ಸಲಹಾ ಸಮಿತಿ ಸಭೆಯನ್ನು ಜಿಲ್ಲಾಧಿಕಾರಿಗಳಾದ ಶ್ರೀಮತಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ವೇಳೆ ಬ್ಯಾಂಕ್ ನ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಕೇಂದ್ರ ಕಚೇರಿಯಲ್ಲಿ ಇಂದು ಬ್ಯಾಂಕ್ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಶ್ರೀ ಬೆಳ್ಳಿ ಪ್ರಕಾಶ್ ರವರು, ಉಪಾಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ರವರು ಹಾಗೂ ಮಾಜಿ ಉಪಾಧ್ಯಕ್ಷರಾದ ಶ್ರೀ ಟಿ. ಎಂ. ಚಂದ್ರಶೇಖರ್ ರವರಿಗೆ ಸನ್ಮಾನಿಸಿದ ಕ್ಷಣ.
ಇಂದು ಟಿ. ನರಸೀಪುರ ಶಾಖೆಗೆ ಮಾನ್ಯ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್. ಟಿ ಸೋಮಶೇಖರ್ ರವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ ಹರೀಶ್ ರವರು, ಉಪಾಧ್ಯಕ್ಷರಾದ ಶ್ರೀ ಬಿ. ಎನ್ ಸದಾನಂದ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಜಿ. ಸಿ ಜನಾರ್ದನ್, ಪ್ರಧಾನ ವ್ಯವಸ್ಥಾಪಕರಾದ ಶ್ರೀ ಶಶಿ ರವರು ಹಾಗೂ ಶಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಹಾಗೂ 'ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ' ಇದರ ಸಹಯೋಗದೊಂದಿಗೆ ಕೊಳ್ಳೆಗಾಲ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಂಘದ ನೂತನ ಸದಸ್ಯರಿಗೆ 'ಕೆ.ಸಿ.ಸಿ. ಬೆಳೆ ಸಾಲ ವಿತರಣೆ ಕಾರ್ಯಕ್ರಮ'ಕ್ಕೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ. ಹರೀಶ್ ರವರು ಚಾಲನೆ ನೀಡಿದರು. ಈ ವೇಳೆ ಅರ್ಹ [...]
ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ಅವರು 'ಕಾಯಕ ಯೋಜನೆ'ಯಡಿಯಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಸಾಲವನ್ನು ವಿತರಿಸಿದರು.ಈ ಸಂದರ್ಭದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ನ ಉಪಾಧ್ಯಕ್ಷರಾಗಿ ಆಯ್ಕೆಯಾದ ನಮ್ಮ ಎಂ.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಅವರಿಗೆ ಬ್ಯಾಂಕ್ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು.