ರೈತರಿಗೆ ಸಾಲ ಹಾಗೂ ಟ್ರ್ಯಾಕ್ಟರ್ ವಿತರಣೆ

ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ 'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್' ಹಾಗೂ 'ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ'ಗಳ ಸಹಯೋಗದೊಂದಿಗೆ ನಮ್ಮ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ. ಹರೀಶ್ ಗೌಡ ಅವರು ರೈತರಿಗೆ ಸಾಲ ಹಾಗೂ ಟ್ರ್ಯಾಕ್ಟರ್ ವಿತರಿಸಿದರು. ಈ ವೇಳೆ ಬ್ಯಾಂಕಿನ ಉಪಾಧ್ಯಕ್ಷರಾದ ಬಿ. ಎನ್. ಸದಾನಂದ, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.  

ನಮ್ಮ ಬ್ಯಾಂಕಿಗೆ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬೆಳ್ಳಿ ಪ್ರಕಾಶ್ ಭೇಟಿ

ಇಂದು ನಮ್ಮ ಪ್ರಧಾನ ಕಚೇರಿಗೆ ಕಡೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಅಪೆಕ್ಸ್ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಬೆಳ್ಳಿ ಪ್ರಕಾಶ್ ರವರು ಭೇಟಿ ನೀಡಿದ ಸಂದರ್ಭ.

ರೈತ ಸ್ಪಂದನ ಕಾರ್ಯಕ್ರಮ

ನಮ್ಮ ಬ್ಯಾಂಕಿನ ವತಿಯಿಂದ ಇಂದು ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಹಮ್ಮಿಕೊಂಡಿದ್ದ ‘ರೈತ ಸ್ಪಂದನ’ ಕಾರ್ಯಕ್ರಮವನ್ನು ಮಾನ್ಯ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ಅವರು ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ.ಡಿ ಹರೀಶ್ ಗೌಡ ಹಾಗೂ ಮೈಮುಲ್ ಅಧ್ಯಕ್ಷರಾದ ಪ್ರಸನ್ನ ಅವರ ಜೊತೆಗೂಡಿ ಉದ್ಘಾಟಿಸಿದರು.

ಹೆಬ್ಬಾಳದಲ್ಲಿ ನೂತನ ಶಾಖಾ ಕಟ್ಟಡ ಉದ್ಘಾಟನೆ

'ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ' ದ ನೂತನ ಶಾಖೆಯನ್ನು ಇಂದು ಹೆಬ್ಬಾಳ್ ದಲ್ಲಿ ಆರಂಭಿಸಲಾಗಿದ್ದು, ಈ ನೂತನ ಶಾಖಾ ಕಟ್ಟಡವನ್ನು ಮಾನ್ಯ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್ ಅವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜನಾರ್ಧನ್, ನಿರ್ದೇಶಕರುಗಳು ಹಾಗೂ ಬ್ಯಾಂಕಿನ ಸಿಬ್ಬಂದಿ [...]