ಇಂದು ಎಂ.ಸಿ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಜಿ ಡಿ ಹರೀಶ್ ಗೌಡ್ರು ಧ್ವಜಾರೋಹಣ ಮಾಡುವ ಮುಖಾಂತರ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ ಸಿ ಜನಾರ್ಧನ್, ಮಂಜು ಗೌಡ್ರು ಹಾಗೂ ಅಧಿಕಾರಿವರ್ಗದವರು-ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಹೆಬ್ಬಾಳ ಶಾಖೆಯ ವತಿಯಿಂದ 6 ಲಕ್ಷ ರೂಪಾಯಿಗಳ ವಾಹನ ಸಾಲದಲ್ಲಿ ನೀಡಲಾದ ಕ್ಯಾಂಟರ್ ವಾಹನದ ಕೀ ಅನ್ನು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಜಿ.ಡಿ. ಹರೀಶ್ ಗೌಡ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.