ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹಾಗೂ ಹೊಸ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ವಿತರಣೆ

ಮೈಸೂರು ಮತ್ತು ಚಾಮರಾಜನಗರ ಸಹಕಾರ ಕೇಂದ್ರ ಬ್ಯಾಂಕ್ ನಿ., ಮೈಸೂರು ಜಿಲ್ಲಾ ಹಾಲು ಒಕ್ಕೂಟ ಸಂಘ ನಿ. ಮತ್ತು ಸಹಕಾರ ಇಲಾಖೆ ವತಿಯಿಂದ ಹುಣಸೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ “ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯರಿಗೆ ಗೌರವಧನ ಚೆಕ್ ವಿತರಣೆ, ಹೊಸ ರೈತ ಸದಸ್ಯರಿಗೆ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ವಿತರಣಾ ಹಾಗೂ ಕಾರ್ಯಕ್ರಮ”ವನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಹಕಾರ ಸಚಿವರಾದ ಶ್ರೀ ಎಸ್ ಟಿ ಸೋಮಶೇಖರ, ಮೈಸೂರು ಕೊಡಗು ಸಂಸದರಾದ ಶ್ರೀ ಪ್ರತಾಪ್ ಸಿಂಹ, ಹುಣಸೂರು ಶಾಸಕಾರದ ಶ್ರೀ ಹೆಚ್ ಪಿ. ಮಂಜುನಾಥ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಜಿ ಡಿ ಹರೀಶ್ ಅವರು ಉದ್ಘಾಟಿಸಿದರು. ಈ ವೇಳೆ ರೈತ ಫಲಾನುಭವಿಗಳಿಗೆ ಬೆಳೆ ಸಾಲ ವಿತರಣೆ ಮಾಡಿ, ಅರ್ಹ ರೈತರಿಗೆ ಟ್ರ್ಯಾಕ್ಟರ್ ವಿತರಣೆ ಮಾಡಲಾಯಿತು.