ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ನಂಜನಗೂಡಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇಂದು ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಎಸ್.ಟಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಕೊರೊನಾ ಯೋಧರನ್ನು ಗೌರವಿಸಿ ಚೆಕ್ ವಿತರಣೆ ಮಾಡಲಾಯಿತು. ನಂತರ ಕೊರೊನಾ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿರುವವರಿಗೆ ನೆರವಾಗುವ ಹಿತದೃಷ್ಟಿಯಿಂದ ಹೊಸ ರೈತ ಸದಸ್ಯರುಗಳಿಗೆ ಬೆಳೆ ಸಾಲ ವಿತರಣೆ ಮಾಡಲಾಯಿತು.
ಈ ವೇಳೆ ಶಾಸಕರಾದ ಹರ್ಷವರ್ಧನ್, ಮೈಸೂರಿನ ಡಿಸಿ ಅಭಿರಾಮ್ ಜಿ ಶಂಕರ್, ಎಸ್ ಪಿ ಸಿಪಿ ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಓ ಪ್ರಶಾಂತ್ ಮಿಶ್ರ, ಎಂ ಡಿ ಸಿ ಸಿ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳು ಹಾಜರಿದ್ದರು.