ಇಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ‘ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್’ ಹಾಗೂ ‘ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ’ಗಳ ಸಹಯೋಗದೊಂದಿಗೆ ನಮ್ಮ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ. ಹರೀಶ್ ಗೌಡ ಅವರು ರೈತರಿಗೆ ಸಾಲ ಹಾಗೂ ಟ್ರ್ಯಾಕ್ಟರ್ ವಿತರಿಸಿದರು.
ಈ ವೇಳೆ ಬ್ಯಾಂಕಿನ ಉಪಾಧ್ಯಕ್ಷರಾದ ಬಿ. ಎನ್. ಸದಾನಂದ, ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.