‘ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ಹಾಗೂ ‘ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ’ ಇದರ ಸಹಯೋಗದೊಂದಿಗೆ ಕೊಳ್ಳೆಗಾಲ ಶಾಖೆ ವತಿಯಿಂದ ಹಮ್ಮಿಕೊಂಡಿದ್ದ ಸಂಘದ ನೂತನ ಸದಸ್ಯರಿಗೆ ‘ಕೆ.ಸಿ.ಸಿ. ಬೆಳೆ ಸಾಲ ವಿತರಣೆ ಕಾರ್ಯಕ್ರಮ’ಕ್ಕೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಸನ್ಮಾನ್ಯ ಶ್ರೀ ಜಿ.ಡಿ. ಹರೀಶ್ ರವರು ಚಾಲನೆ ನೀಡಿದರು.
ಈ ವೇಳೆ ಅರ್ಹ 182 ರೈತ ಫಲಾನುಭವಿಗಳಿಗೆ ರೂ 1.73 ಕೋಟಿ ಬೆಳೆ ಸಾಲ ವಿತರಣೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್ ನರೇಂದ್ರ ರವರು, ಎಂಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಸದಾನಂದ ರವರು, ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಹಾಗೂ ಸಿಬ್ಬಂದಿ ವೃಂದ ಉಪಸ್ಥಿತರಿದ್ದರು