ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತಕ್ಕೆ (ಎಂಸಿಡಿಸಿಸಿ) ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನಿಂದ ‘ಬಿ ವಿಭಾಗ’ದಲ್ಲಿ ‘ಉತ್ತಮ ಕಾರ್ಯನಿರ್ವಹಣೆ’ ನೀಡಿದ ಬ್ಯಾಂಕ್ ಎಂಬ ಪ್ರಶಸ್ತಿ ದೊರೆತಿದೆ.
ಈ ಹಿನ್ನೆಲೆಯಲ್ಲಿ ಇಂದು ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರೂ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದ ಉಪಾಧ್ಯಕ್ಷರು ಆದ ಜಿ.ಡಿ.ಹರೀಶ್ ಗೌಡ ಹಾಗೂ ಎಂಸಿಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕರಾದ ಜೆ.ಸಿ.ಜನಾರ್ಧನ್ ಅವರು ಪ್ರಶಸ್ತಿ ಸ್ವೀಕರಿಸಿ ಗೌರವಕ್ಕೆ ಪಾತ್ರರಾದರು.
ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ನ ಅಧೀನದಲ್ಲಿ ಕಾರ್ಯನಿರ್ವಹಿಸುವ ಬ್ಯಾಂಕ್ಗಳಿಗೆ ಉತ್ತಮ ಕಾರ್ಯನಿರ್ವಹಣೆಗೆ ಅಧಾರದ ಮೇಲೆ ವಿವಿಧ ಶ್ರೇಣಿಗಳಲ್ಲಿ ಪ್ರಶಸ್ತಿ ಪ್ರಧಾನ ಮಾಡುತ್ತ ಬಂದಿದೆ. ಈ ಪ್ರಶಸ್ತಿ ವಿಭಾಗದಲ್ಲಿ ಎಂಸಿಡಿಸಿಸಿ ಬ್ಯಾಂಕ್ ಗೆ ‘ಬಿ ವಿಭಾಗ’ದಲ್ಲಿ ‘ಉತ್ತಮ ಕಾರ್ಯನಿರ್ವಹಣೆ’ ನೀಡಿದ ಬ್ಯಾಂಕ್ ಎಂಬ ಪ್ರಶಸ್ತಿ ಸಂದಿರುವುದು ಸಂತಸದ ವಿಷಯ.
ಈ ವೇಳೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಕಡೂರು ಶಾಸಕರಾದ ಬೆಳ್ಳಿಪ್ರಕಾಶ್, ಅಪೆಕ್ಸ್ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್.ದೇವರಾಜ್ ಹಾಗೂ ಬ್ಯಾಂಕ್ ನ ನಿರ್ದೇಶಕರು ಇತರರು ಉಪಸ್ಥಿತರಿದ್ದರು.