‘ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ’ ದ ನೂತನ ಶಾಖೆಯನ್ನು ಇಂದು ಹೆಬ್ಬಾಳ್ ದಲ್ಲಿ ಆರಂಭಿಸಲಾಗಿದ್ದು, ಈ ನೂತನ ಶಾಖಾ ಕಟ್ಟಡವನ್ನು ಮಾನ್ಯ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್ ಅವರ ನೇತೃತ್ವದಲ್ಲಿ ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜನಾರ್ಧನ್, ನಿರ್ದೇಶಕರುಗಳು ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.