ಪ್ರಗತಿ ಪರಿಶೀಲನಾ ಸಭೆ

‘ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ’ದ ಪ್ರಧಾನ ಕಚೇರಿಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವರಾದ ಶ್ರೀ ಎಸ್. ಟಿ. ಸೋಮಶೇಖರ್ ರವರು ಬ್ಯಾಂಕ್ ನ “ಪ್ರಗತಿ ಪರಿಶೀಲನಾ ಸಭೆ” ನಡೆಸಿದರು. ಈ ಸಂದರ್ಭದಲ್ಲಿ ಎಂಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ನ ಉಪಾಧ್ಯಕ್ಷರಾದ ಶ್ರೀ ಜಿ. ಡಿ. ಹರೀಶ್ ರವರು, ಉಪಾಧ್ಯಕ್ಷರಾದ ಶ್ರೀ ಬಿ. ಸದಾನಂದ ರವರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಜಿ. ಸಿ. ಜನಾರ್ಧನ್ ರವರು, ನಿರ್ದೇಶಕರುಗಳು, ಪ್ರಧಾನ ವ್ಯವಸ್ಥಾಪಕರಾದ ಶಶಿಧರ್ ರವರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.